ಪರಿಶಿಷ್ಟ ಜಾತಿ, ಪಂಗಡ ಫಲಾನುಭವಿಗಳಿಗೆ ಸಿಹಿ ಸುದ್ದಿ: ಬೈಕ್ ವಿತರಣೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 7 ನಿಗಮಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 100 ಬೈಕ್ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭದಲ್ಲಿ ಇಬ್ಬರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಬೈಕ್ ಕೀ ಹಸ್ತಾಂತರ ಮಾಡಿ ಅವರು ಮಾತನಾಡಿದರು.

ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ತಲಾ 100 ಬೈಕ್ ವಿತರಿಸಲಿದ್ದು, ಇದರಿಂದ ಡೆಲಿವರಿ ಕೆಲಸ ಮಾಡುವವರಿಗೆ, ಹಾಲು ಪೂರೈಕೆ ಮಾಡುವವರಿಗೆ ಅನುಕೂಲವಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಸಮುದಾಯಗಳ ನೋವು ಗೊತ್ತಿರುವುದರಿಂದ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಮೊದಲ ಬಾರಿಗೆ ಬೈಕ್ ವಿತರಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಗಂಗಾ ಕಲ್ಯಾಣ ಯೋಜನೆ ಅನುಷ್ಠಾನದಲ್ಲಿ ಮಧ್ಯವರ್ತಿಗಳ ಆವಳಿ ತಪ್ಪಿಸುವ ಉದ್ದೇಶದಿಂದ ಫಲಾನುಭವಿಗಳ ಖಾತೆಗೆ ನೇರವಾಗಿ 75 ಸಾವಿರ ರೂ. ವರ್ಗಾವಣೆ ಮಾಡಲಾಗುತ್ತಿದೆ. 300 ಪೌರಕಾರ್ಮಿಕರನ್ನು ಸಿಂಗಾಪುರ ಪ್ರವಾಸ ಕಳುಹಿಸಲಾಗುತ್ತಿದೆ. 13,000 ಪೌರಕಾರ್ಮಿಕರನ್ನು ಕಾಯಂ ಮಾಡಲಾಗಿದೆ. ಪೌರಕಾರ್ಮಿಕರನ್ನು ಇನ್ನು ಮುಂದೆ ಪೌರ ನೌಕರರು ಎಂದು ಕರೆಯಬೇಕು ಸಿಎಂ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read