HomeKarnatakaಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ನೆರವಿಗಾಗಿ ವಿಶೇಷ ಠಾಣೆ ಆರಂಭಿಸಲು ಸಂಪುಟ ಸಭೆಯಲ್ಲಿ ಮಹತ್ವದ...

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ನೆರವಿಗಾಗಿ ವಿಶೇಷ ಠಾಣೆ ಆರಂಭಿಸಲು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಪರಿಶಿಷ್ಟರ ನೆರವಿಗೆ ವಿಶೇಷ ಠಾಣೆಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಾಗಿ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನು ಜಿಲ್ಲೆಗೊಂದರಂತೆ ವಿಶೇಷ ಪೊಲೀಸ್ ಠಾಣೆಗಳು ಎಂದು ಘೋಷಿಸುವ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ವಿಶೇಷ ಠಾಣೆಗಳ ನಿರ್ವಹಣೆಗೆ 450 ಹುದ್ದೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶೇಕಡ 96ರಷ್ಟು ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತಿಲ್ಲ ಎಂಬ ಪ್ರಮುಖ ಕಾರಣದ ಜೊತೆಗೆ ಸಾಮಾನ್ಯ ಪೊಲೀಸ್ ಠಾಣೆಗಳ ಮೇಲಿನ ಒತ್ತಡ ತಗ್ಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2022ರ ಅಂತ್ಯದವರೆಗೆ 7633 ಪ್ರಕರಣ ನ್ಯಾಯಾಲಯದ ವಿಚಾರಣೆಗೆ ಬಂದಿದ್ದು, 1723 ಪ್ರಕರಣ ವಿಲೇವಾರಿಯಾಗಿವೆ. 1363 ಖುಲಾಸೆಯಾಗಿವೆ. ಕೇವಲ ಶೇ. 4ರಷ್ಟು 68 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾನ್ಯ ಠಾಣೆಗಳಲ್ಲಿ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆ ಆಗುತ್ತಿಲ್ಲ. ಹೀಗಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಇವುಗಳ ಕಾರ್ಯನಿರ್ವಹಣೆ ವಿಧಾನ, ಹುದ್ದೆ ಸೃಷ್ಟಿ ಮೊದಲಾದ ವಿವರಗಳನ್ನು ಅಂತಿಮಗೊಳಿಸುವ ಅಧಿಕಾರವನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮತ್ತು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರಿಗೆ ಸಂಪುಟ ಸಭೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular