HomeKarnatakaಎಸ್.ಸಿ., ಎಸ್.ಟಿ. ಸಮುದಾಯಕ್ಕೆ ಗುಡ್ ನ್ಯೂಸ್: ಮೀಸಲಾತಿ ಹೆಚ್ಚಳಕ್ಕೆ ಸಾಂವಿಧಾನಿಕ ಭದ್ರತೆಗೆ ಕ್ರಮ: 9ನೇ ಶೆಡ್ಯೂಲ್...

ಎಸ್.ಸಿ., ಎಸ್.ಟಿ. ಸಮುದಾಯಕ್ಕೆ ಗುಡ್ ನ್ಯೂಸ್: ಮೀಸಲಾತಿ ಹೆಚ್ಚಳಕ್ಕೆ ಸಾಂವಿಧಾನಿಕ ಭದ್ರತೆಗೆ ಕ್ರಮ: 9ನೇ ಶೆಡ್ಯೂಲ್ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾಂವಿಧಾನಿಕ ಮಾನ್ಯತೆ ಕಲ್ಪಿಸಲು ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಕುರಿತಾಗಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಒಟ್ಟಾರೆ ಶೇಕಡ 6 ರಷ್ಟು ಹೆಚ್ಚಳ ಮಾಡಲಾಗಿದ್ದು, ಇದಕ್ಕೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣವನ್ನು ಶೇಕಡ 15 ರಿಂದ 17ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಳ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ.

ಜನವರಿ 10 ರ ನಂತರ ನಡೆದ ಎಲ್ಲಾ ನೇಮಕಾತಿ, ಬಡ್ತಿಯನ್ನು ಹೊಸ ಮೀಸಲಾತಿ ಅನ್ವಯ ನೀಡುವಂತೆ ಆದೇಶಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕಾಯ್ದೆಯನ್ನು 9ನೇ ಶೆಡ್ಯೂಲ್ ಗೆ ಸೇರಿಸಲು ಕೇಂದ್ರಕ್ಕೆ ಸಂಪುಟ ಸಭೆ ಶಿಫಾರಸು ಮಾಡಿದ್ದು, ಮೀಸಲಾತಿ ಹೆಚ್ಚಳಕ್ಕೆ ಸಾಂವಿಧಾನಿಕ ಭದ್ರತೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular