HomeKarnatakaಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಗುಡ್ ನ್ಯೂಸ್: 1 ಕೋಟಿ ರೂ.ವರೆಗಿನ ಎಲ್ಲಾ ಕಾಮಗಾರಿಗಳಲ್ಲಿಯೂ ಮೀಸಲು

ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಗುಡ್ ನ್ಯೂಸ್: 1 ಕೋಟಿ ರೂ.ವರೆಗಿನ ಎಲ್ಲಾ ಕಾಮಗಾರಿಗಳಲ್ಲಿಯೂ ಮೀಸಲು

ಬೆಂಗಳೂರು: ಒಂದು ಕೋಟಿ ರೂಪಾಯಿವರೆಗಿನ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಮೀಸಲಾತಿ ಒದಗಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಇಲಾಖೆಗಳ ವ್ಯಾಪ್ತಿಯಲ್ಲಿ ನಡೆಯುವ ಒಂದು ಕೋಟಿ ರೂಪಾಯಿವರೆಗಿನ ಎಲ್ಲಾ ಕಾಮಗಾರಿಗಳಲ್ಲಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಮೀಸಲಾತಿ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2016ರಲ್ಲಿ 50 ಲಕ್ಷ ರೂಪಾಯಿವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಮೀಸಲಾತಿ ಕಲ್ಪಿಸಿತ್ತು. ಇದನ್ನು ಒಂದು ಕೋಟಿ ರೂಪಾಯಿಗೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಸರ್ಕಾರಿ ಇಲಾಖೆಗಳ ವ್ಯಾಪ್ತಿಯಲ್ಲಿ ನಡೆಯುವ ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿಗೆ ಶೇಕಡ 17.15 ರಷ್ಟು, ಪರಿಶಿಷ್ಟ ಪಂಗಡದವರಿಗೆ ಶೇಕಡಾ 6.95 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular