ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನ 2 ಲಕ್ಷ ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂ, ಐಐಎಫ್ಸಿ, ಎನ್ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು 1 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಸಕಇ 165 ಪಕವಿ 2018 ದಿನಾಂಕ:27.12.2018ರ ಆದೇಶದಲ್ಲಿ ಹೆಚ್ಚಿಸಿ ಆದೇಶಿಸಲಾಗಿರುತ್ತದೆ.

ಮುಂದುವರೆದಂತೆ. ಪಿ.ಯು.ಸಿ.ಯಲ್ಲಿ ಶೇಕಡ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು NEET ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದಡಿ MBBS ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೊದಲನೆ ವರ್ಷದಲ್ಲಿ 25 ಲಕ್ಷ ರೂ.ಗಳನ್ನು ಕಾಲೇಜು ಶುಲ್ಕವಾಗಿ ಪಾವತಿಸಲು ಮತ್ತು ಸದರಿ ವಿದ್ಯಾರ್ಥಿಯು MBBS ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಪುನ: 25 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು ಮಂಜೂರು ಮಾಡುವ ಅಂಶವನ್ನು ಸೇರ್ಪಡೆ ಮಾಡಿ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read