HomeKarnatakaಪ್ರತಿ ತಿಂಗಳ ಎರಡನೇ ಭಾನುವಾರ 'ಪರಿಶಿಷ್ಟ ಜಾತಿ, ಪಂಗಡ ದಿನ' ಕಡ್ಡಾಯ

ಪ್ರತಿ ತಿಂಗಳ ಎರಡನೇ ಭಾನುವಾರ ‘ಪರಿಶಿಷ್ಟ ಜಾತಿ, ಪಂಗಡ ದಿನ’ ಕಡ್ಡಾಯ

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರ ಸೇವಾ ಸಂಬಂಧಿತ ಸಮಸ್ಯೆಗಳು, ಕುಂದುಕೊರತೆಗಳು ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ, ಪ್ರತಿ ತಿಂಗಳ ಎರಡನೇ ಭಾನುವಾರದಂದು “ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದಿನ”ವನ್ನು ಕಡ್ಡಾಯವಾಗಿ ಆಚರಿಸಿ ಕುಂದುಕೊರತೆಗಳ ಆಲಿಕೆ ಸಭೆಗಳನ್ನು ನಿಯಮಿತವಾಗಿ ನಡೆಸುವಂತೆ ರಾಜ್ಯದ ಎಲ್ಲಾ ಪೊಲೀಸ್ ಘಟಕಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಈ ಕುರಿತು ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ (ಡಿಜಿ & ಐಜಿಪಿ) ನಿರ್ದೇಶನ  ನೀಡಲಾಗಿದ್ದು, ಈಗಾಗಲೇ ಸ್ಥಾಯಿ ಆದೇಶ ಸಂಖ್ಯೆ 1010, ದಿನಾಂಕ 17.11.2015ರ ಮೂಲಕ ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತಾಲಯಗಳು, ಜಿಲ್ಲಾ ಪೊಲೀಸ್ ಕಚೇರಿಗಳು, ಸಶಸ್ತ್ರ ಮೀಸಲು ಪಡೆಗಳು, ವಿಶೇಷ ಪೊಲೀಸ್ ಘಟಕಗಳು ಹಾಗೂ ಇತರೆ ಎಲ್ಲಾ ಪೊಲೀಸ್ ಸಂಸ್ಥೆಗಳಲ್ಲಿ ಪ್ರತಿ ತಿಂಗಳ ಎರಡನೇ ಭಾನುವಾರದಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರೊಂದಿಗೆ ಕುಂದುಕೊರತೆಗಳ ಆಲಿಕೆ ಸಭೆ ನಡೆಸಲು ಸೂಚನೆ ನೀಡಲಾಗಿತ್ತು.

ಆದರೆ, ಹಲವು ಕಡೆಗಳಲ್ಲಿ ಈ ಸಭೆಗಳು ನಿಯಮಿತವಾಗಿ ನಡೆಯುತ್ತಿಲ್ಲ ಎಂಬ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪೊಲೀಸ್ ಸಿಬ್ಬಂದಿಯವರ ಸಮಸ್ಯೆಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ರೂಪಿಸಲಾಗಿರುವ ಈ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಯಾಗುವುದು ಅತ್ಯಂತ ಅಗತ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಸಭೆಯಲ್ಲಿ ಸ್ವೀಕರಿಸಲಾದ ಮನವಿ, ದೂರುಗಳು ಹಾಗೂ ಅವುಗಳ ಕುರಿತು ಕೈಗೊಂಡ ಕ್ರಮಗಳ ವಿವರಗಳನ್ನು ದಾಖಲಿಸಿ ನಿರ್ವಹಿಸಬೇಕು. ತಕ್ಷಣವೇ ಪರಿಹರಿಸಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಬೇಕು. ಸರ್ಕಾರದ ಅಥವಾ ನೀತಿ ಮಟ್ಟದ ನಿರ್ಧಾರ ಅಗತ್ಯವಿರುವ ವಿಷಯಗಳನ್ನು ವಿಳಂಬವಿಲ್ಲದೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಶಿಫಾರಸು ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಸೇವಾ ಹಿತಾಸಕ್ತಿ, ಕಲ್ಯಾಣ ಹಾಗೂ ನ್ಯಾಯಯುತ ಆಡಳಿತವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಈ ಸಭೆಗಳು ಅತ್ಯಂತ ಮಹತ್ವದ್ದಾಗಿದ್ದು, ರಾಜ್ಯದ ಎಲ್ಲ ಪೊಲೀಸ್ ಘಟಕಗಳು ಪ್ರತಿ ತಿಂಗಳ ಎರಡನೇ ಭಾನುವಾರದಂದು ಯಾವುದೇ ಕಾರಣಕ್ಕೂ ತಪ್ಪದೇ ಸಭೆ ನಡೆಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular