HomeKarnatakaಪರಿಶಿಷ್ಟ ಜಾತಿ, ಪಂಗಡದವರಿಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲರಿಗೂ ಸಹಕಾರಿ ಸದಸ್ಯತ್ವ ನೋಂದಣಿಗೆ ಸರ್ಕಾರದಿಂದಲೇ ಶುಲ್ಕ...

ಪರಿಶಿಷ್ಟ ಜಾತಿ, ಪಂಗಡದವರಿಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲರಿಗೂ ಸಹಕಾರಿ ಸದಸ್ಯತ್ವ ನೋಂದಣಿಗೆ ಸರ್ಕಾರದಿಂದಲೇ ಶುಲ್ಕ ಪಾವತಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಪ್ರತಿಯೊಬ್ಬ ವ್ಯಕ್ತಿಗೂ ಸಹಕಾರಿ ಸಂಘಗಳಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲಾಗುವುದು. ಇದಕ್ಕೆ ತಗಲುವುದು ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪರಿಶಿಷ್ಟ ಜಾತಿ ಉಪ ಯೋಜನೆ(SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ(TSP) ಅನುಷ್ಠಾನ ಕುರಿತಾಗಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ನಡೆಸಿದ ಸಚಿವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಶಿಷ್ಟ ಜಾತಿ, ಪಂಗಡಗಳಿಗೆ ಸೇರಿದ ಎಲ್ಲರಿಗೂ ಸದಸ್ಯತ್ವ ನೀಡಬೇಕೆಂಬುದು ಸರ್ಕಾರದ ಚಿಂತನೆಯಾಗಿದೆ. ರಾಜ್ಯದಲ್ಲಿ 1.4 ಕೋಟಿಯಷ್ಟು ಪರಿಶಿಷ್ಟ ಸಮುದಾಯದವರಿದ್ದಾರೆ. ಅವರನ್ನು ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಸುವುದರಿಂದ ಸಮುದಾಯದವರಿಗೆ ಅನುಕೂಲವಾಗಲಿದೆ. ಸದಸ್ಯತ್ವ ನೋಂದಣಿ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular