ಗುಡ್ ನ್ಯೂಸ್: ಸೆಪ್ಟೆಂಬರ್ ನಲ್ಲಿ ಗೃಹ ಸಾಲದ ಮೇಲಿನ ಬಡ್ಡಿ ಪರಿಹಾರ ಯೋಜನೆ ಆರಂಭ

ನವದೆಹಲಿ: ನಗರಗಳಲ್ಲಿ ಸ್ವಂತ ಮನೆ ಹೊಂದುವ ಕನಸು ಕಾಣುವವರಿಗೆ ಬ್ಯಾಂಕ್ ಸಾಲದ ಮೇಲಿನ ಬಡ್ಡಿಯಲ್ಲಿ ಪರಿಹಾರ ನೀಡುವ ಯೋಜನೆಯನ್ನು ಸೆಪ್ಟೆಂಬರ್‌ನಲ್ಲಿ ಪ್ರಾರಂಭಿಸಲಾಗುವುದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ ದೀಪ್ ಸಿಂಗ್ ಪುರಿ ಗುರುವಾರ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯೋಜನೆಯು ವಿಧಾನಗಳ ಸುಧಾರಿತ ಹಂತದಲ್ಲಿದೆ ಎಂದರು.

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ನಗರಗಳಲ್ಲಿ ವಾಸಿಸುವ ಸ್ವಂತ ಮನೆ ಇಲ್ಲದ ಮಧ್ಯಮ ವರ್ಗದ ಕುಟುಂಬಗಳಿಗೆ ಯೋಜನೆಯನ್ನು ಘೋಷಿಸಿ ನಗರಗಳಲ್ಲಿ ಬಾಡಿಗೆ ಮನೆಗಳು, ಅನಧಿಕೃತ ಕಾಲೋನಿಗಳು ಮತ್ತು ಗುಡಿಸಲುಗಳಲ್ಲಿ ವಾಸಿಸುವ ಕುಟುಂಬಗಳಿಗೆ ಸ್ವಂತ ಮನೆ ನಿರ್ಮಿಸಲು ಲಕ್ಷಾಂತರ ರೂಪಾಯಿ ಸಹಾಯವನ್ನು ನೀಡುವ ಮೂಲಕ ಬ್ಯಾಂಕ್ ಸಾಲದ ಬಡ್ಡಿಯಲ್ಲಿ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದರು.

ಈ ಯೋಜನೆಯನ್ನು ಸೆಪ್ಟೆಂಬರ್‌ನಲ್ಲಿ ಸಂಪೂರ್ಣ ವಿವರವಾಗಿ ಘೋಷಿಸಲಾಗುವುದು. ಇದು ನಾವು ಈಗಾಗಲೇ ಹೊಂದಿರುವ(ಇದೇ ರೀತಿಯ ಯೋಜನೆಗಳು) ಪೂರಕವಾಗಿರುತ್ತದೆ. ನಾವು ಯೋಜನೆಯ ವಿಧಾನಗಳನ್ನು ರೂಪಿಸುತ್ತಿದ್ದೇವೆ. ಇದು ಮುಂದುವರಿದ ಹಂತದಲ್ಲಿದೆ ಎಂದು ಪುರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read