ಸಾಗರ ಸಮಾಜ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ತಂತ್ರಾಂಶದಲ್ಲಿ http://swd.karnataka.gov.in ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್ ಕಾಪಿಯನ್ನು ತಮ್ಮಕಾಲೇಜುಗಳಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಾಗರ ತಾಲ್ಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08183-229402 /9480843192 ಗಳನ್ನು ಸಂಪರ್ಕಿಸುವುದು.