HomeKarnatakaತರಗತಿಯಲ್ಲಿ ಸ್ಕೂಲ್ ಬ್ಯಾಗ್ ತೆಗೆದ ವಿದ್ಯಾರ್ಥಿಗೆ ಶಾಕ್: ನಾಗರಹಾವು ಪತ್ತೆ

ತರಗತಿಯಲ್ಲಿ ಸ್ಕೂಲ್ ಬ್ಯಾಗ್ ತೆಗೆದ ವಿದ್ಯಾರ್ಥಿಗೆ ಶಾಕ್: ನಾಗರಹಾವು ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ನಾಗರಹಾವು ಪತ್ತೆಯಾಗಿದೆ.

ಎರಡನೇ ತರಗತಿ ವಿದ್ಯಾರ್ಥಿ ಭವನ್ ಶುಕ್ರವಾರ ಬೆಳಗ್ಗೆ ಶಾಲೆಗೆ ಬಂದಿದ್ದು, ಶಿಕ್ಷಕರು ಪಾಠ ಓದಲು ಪುಸ್ತಕ ತೆಗೆಯುವಂತೆ ಮಕ್ಕಳಿಗೆ ಸೂಚಿಸಿದ್ದಾರೆ. ಈ ವೇಳೆ ಭುವನ್ ಬ್ಯಾಗ್ ತೆರೆದಾಗ ನಾಗರಹಾವು ಮಲಗಿರುವುದು ಕಂಡು ಬಂದಿದೆ. ಪಕ್ಕದಲ್ಲಿ ಕುಳಿತಿದ್ದ ಸಹಪಾಠಿ ಮಣಿಕಂಠನಿಗೆ ಹಾವು ತೋರಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೂಡಲೇ ಮಣಿಕಂಠ ಬ್ಯಾಗ್ ನ ಜಿಪ್ ಎಳೆದು ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ಶಿಕ್ಷಕರು ಕೂಡಲೇ ಬ್ಯಾಗ್ ಅನ್ನು ಕೊಠಡಿಯಿಂದ ಹೊರಗೆ ತಂದು ತೆಗೆದು ನೋಡಿದಾಗ ನಾಗರಹಾವು ಇರುವುದು ಗೊತ್ತಾಗಿದೆ. ನಂತರ ಪೋಷಕರನ್ನು ಕರೆಸಿ ಬ್ಯಾಗ್ ನಲ್ಲಿದ್ದ ನಾಗರಹಾವನ್ನು ಸಮೀಪದ ಕಾಡಿಗೆ ಬಿಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular