HomeLatest NewsBIG NEWS: ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿತ: ಓರ್ವ ಸಾವು; ಮೂವರಿಗೆ ಗಂಭೀರ ಗಾಯ

BIG NEWS: ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿತ: ಓರ್ವ ಸಾವು; ಮೂವರಿಗೆ ಗಂಭೀರ ಗಾಯ

ರಾಂಚಿ: ಧಾರಾಕಾರ ಮಳೆಯಿಂದಾಗಿ ಸರ್ಕಾರಿ ಶಾಲೆಯ ಕಟ್ಟಡದ ಮೇಲ್ಛಾವಣಿ ಕುಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಜಾರ್ಖಂಡ್ ನ ರಾಂಚಿಯಲ್ಲಿ ಈ ದುರಂತ ಸಂಭವಿಸಿದೆ. ಪಿಸ್ಕ ಮೊರೆ ಪ್ರದೇಶದ ತಂಗ್ರಾ ತೋಲಿಯಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದೆ. ಅವಶೇಷಗಳಡಿ ಸಿಲುಕಿ ಓರ್ವ ಮೃತಪಟ್ಟಿದ್ದಾರೆ. ಮೂವರನ್ನು ರಕ್ಷಿಸಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೂರಜ್ ಭಾಟಿಯಾ (65) ಮೃತರು. ಮನೀಶ್ ಟಿರ್ಕೆ, ಪ್ರೀತಮ್ ಟಿರ್ಕೆ, ಮೋಟು ಒರೋನ್ ಗಾಯಾಳುಗಳು. ಶಾಲೆಯ ಕಟ್ಟಡದ ಆವರಣದಲ್ಲಿ ಮಲಗಿದ್ದ ವೇಳೆ ಈ ದುರಂತ ಸಂಭವಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular