HomeIndiaBIG NEWS: ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಭೀಕರ ಅಪಘಾತ; 25 ಮಕ್ಕಳಿಗೆ ಗಾಯ

BIG NEWS: ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಭೀಕರ ಅಪಘಾತ; 25 ಮಕ್ಕಳಿಗೆ ಗಾಯ

ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ನಡೆದಿದೆ.

ಶಾಲಾ ಮಕ್ಕಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಖಾಸಗಿ ಶಾಲೆ ಬಸ್ ಪಲ್ಟಿಯಾಗಿದ್ದು, 25ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ನಾಲ್ವರು ವಿದ್ಯಾರ್ಥಿಗಳನ್ನು ಸಿಲ್ಚಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲಾ ಮಕ್ಕಳನ್ನು ಪಿಕ್ ನಿಕ್ ಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular