HomeKarnatakaಶಾಲಾ ಮಕ್ಕಳಿದ್ದ ಪ್ರವಾಸಿ ಬಸ್ ಅಪಘಾತ: ಶಿಕ್ಷಕರು ಸೇರಿ ಮೂವರಿಗೆ ಗಾಯ

ಶಾಲಾ ಮಕ್ಕಳಿದ್ದ ಪ್ರವಾಸಿ ಬಸ್ ಅಪಘಾತ: ಶಿಕ್ಷಕರು ಸೇರಿ ಮೂವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ಸಮೀಪದ ನರ್ತಿಗೆ ಗ್ರಾಮದಲ್ಲಿ ಶಾಲಾ ಮಕ್ಕಳಿದ್ದ ಪ್ರವಾಸಿ ಬಸ್ ಅಪಘಾತಕ್ಕೀಡಾಗಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ಎಸ್.ಡಿ.ಇ.ಎಸ್. ಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಶೈಕ್ಷಣಿಕ ಪ್ರವಾಸಕ್ಕೆ ಆಗಮಿಸಿದ್ದ ವೇಳೆ ಅಪಘಾತ ಸಂಭವಿಸಿದೆ.

ನರ್ತಿಗೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದ್ದು, ಬಸ್ ಚಾಲಕ ಸುರೇಶ್(50) ಅವರ ತಲೆಗೆ ಗಾಯವಾಗಿದೆ. ಶಿಕ್ಷಕಿಯರಾದ ನೀಲಾಂಬರಿ(28), ಶಶಿಕಲಾ(35) ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ನಲ್ಲಿ ಮಕ್ಕಳು ಸೇರಿದಂತೆ 29 ಮಂದಿ ಇದ್ದು, ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹೊಸನಗರದ ಸಾರ್ವಜನಿಕ ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular