HomeLatest NewsBREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಮೈಸೂರು: ಶಾಲಾ ವಾಹನ ಪಲ್ಟಿಯಾಗಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ಶಾಲಾ ವಾಹನ ಏಕಾಏಕಿ ಪಲ್ಟಿಯಾಗಿದೆ. 10ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಂಪ್ಲಾಪುರದ ಎಂ.ಆರ್. ನೋಬಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ಸೇರಿದ ಶಾಲಾ ವಾಹನ ಇದಾಗಿದೆ.

ಗಾಯಾಳು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹುಣಸೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular