HomeLatest NewsBIG NEWS: ಶಾಲಾ ವಾಹನ ಚಾಲಕರ ನಡುವೆ ಪೈಪೋಟಿ: ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಸ್ಕೂಲ್...

BIG NEWS: ಶಾಲಾ ವಾಹನ ಚಾಲಕರ ನಡುವೆ ಪೈಪೋಟಿ: ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಸ್ಕೂಲ್ ಬಸ್

ಬೆಂಗಳೂರು: ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಎರಡು ಶಾಲಾ ಬಸ್ ಗಳ ಚಾಲಕರ ನಡುವೆ ನಾಮುಂದು ತಾ ಮುಂದು ಎಂದು ಪೈಪೋಟಿ ನಡೆದು, ಚಾಲಕ ನಿಯಂತ್ರಣ ತಪ್ಪಿದ ಶಾಲಾ ಬಸ್ ವೊಂದು ಪಲ್ಟಿಯಾಗಿ ಬಿದ್ದಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.

ಮಾದಾವರದ ನೈಸ್ ರಸ್ತೆಯ ಪಿಕಾಕ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಡೆಲ್ಲಿ ಪಬ್ಲಿಕ್ ಸ್ಕೂಲ್ ವಾಹನ ಪಲ್ಟಿಯಾಗಿ ಬಿದ್ದಿದ್ದು, ಹಲವು ಮಕ್ಕಳು ಗಾಯಗೊಂಡಿದ್ದಾರೆ.

ಸ್ಕೂಲ್ ಬಸ್ ಚಾಲಕನ ಬೇಜವಾಬ್ದಾರಿ, ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular