HomeKarnatakaಸ್ಕೂಲ್ ಬಸ್ ಗೆ ಲಾರಿ ಡಿಕ್ಕಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಸ್ಕೂಲ್ ಬಸ್ ಗೆ ಲಾರಿ ಡಿಕ್ಕಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಬಳ್ಳಾಪುರ: ಶಾಲಾ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 44ರ ಪೂಲವಾರಪಲ್ಲಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಸತ್ಯಸಾಯಿ ಶಾಲೆಯ ಬಸ್ ನಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಬಸ್ ಗೆ ಲಾರಿ ಡಿಕ್ಕಿಯಾಗಿದೆ.

ಘಟನೆಯಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಡಿದ್ದು, ಗಾಯಾಳುಗಳನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular