ರಾಯಚೂರು: ಶಾಲಾ ವಾಹನ ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ 8 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಗಾಯಾಳು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿನಿ ಸನ್ನಿಧಿ ಎಂಬುವವಳ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ರಾಯಚೂರು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ರಕ್ ಓವರ್ ಟೇಕ್ ಮಾಡಲು ಹೋಗಿ ಶಾಲಾ ವಾಹನ ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
