HomeKarnataka1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಮಕ್ಕಳ ಭವಿಷ್ಯ ಹಾಳಾಗುತ್ತದೆ ಎಂದು ಪೋಷಕರ ಆಕ್ರೋಶ

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಮಕ್ಕಳ ಭವಿಷ್ಯ ಹಾಳಾಗುತ್ತದೆ ಎಂದು ಪೋಷಕರ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ 2025- 26 ನೇ ಸಾಲಿನಿಂದ ಒಂದನೇ ತರಗತಿಗೆ ದಾಖಲಿಸಲು ಮಕ್ಕಳಿಗೆ ಜೂನ್ 1ಕ್ಕೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕೆಂದು ಎರಡು ವರ್ಷಗಳ ಹಿಂದೆಯೇ ನಿಯಮ ಜಾರಿಗೊಳಿಸಿದೆ. ಈ ನಿಯಮ ಜಾರಿಯಿಂದ 6 ವರ್ಷ ಪೂರ್ಣಗೊಳ್ಳಲು ಕೆಲವೇ ದಿನಗಳಿರುವ, ವಾರ ಕಡಿಮೆ ಇರುವ ಸಾಕಷ್ಟು ಮಕ್ಕಳು ಶಾಲಾ ದಾಖಲಾತಿಯಿಂದ ವಂಚಿತರಾಗುತ್ತಾರೆ. ಹೀಗಾಗಿ ಕೆಲವು ತಿಂಗಳು ವಿನಾಯಿತಿ ನೀಡಬೇಕೆಂದು ಪೋಷಕರ ಸಂಘಟನೆಗಳು ಒತ್ತಾಯಿಸಿವೆ.

ಖಾಸಗಿ ಶಾಲಾ ಸಂಘಟನೆಗಳು, ಸರ್ಕಾರ ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು. ಇದು ಇಂದಿನ ಆದೇಶವಲ್ಲ. ಎರಡು ವರ್ಷಗಳ ಹಿಂದೆಯೇ ಎಲ್ಕೆಜಿ, ಯುಕೆಜಿ ದಾಖಲಾತಿ ವಯೋಮಿತಿ ನಿಗದಿಪಡಿಸಿ ಆದೇಶ ಮಾಡಲಾಗಿದೆ. ಈಗ ಎಲ್ಕೆಜಿ, ಯುಕೆಜಿ ತರಗತಿ ಮಕ್ಕಳು ಬರುವ ಸಾಲಿನಲ್ಲಿ ಒಂದನೇ ತರಗತಿಗೆ ದಾಖಲಾಗಲು ವಯೋಮಿತಿಯಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ಒಂದು ವೇಳೆ ಯಾವುದೇ ಶಾಲೆಗಳು ಸರ್ಕಾರ ನಿಗದಿ ಮಾಡಿದ ವಯೋಮಿತಿಗಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಎಲ್‌ಕೆಜಿ ಯುಕೆಜಿಗೆ ದಾಖಲಿಸಿಕೊಂಡಿದ್ದರೆ ಅದು ಶಾಲೆಗಳ ತಪ್ಪಾಗುತ್ತದೆ ಎಂದು ಹೇಳಲಾಗಿದೆ.

ಒಂದನೇ ತರಗತಿ ದಾಖಲಾತಿಗೆ ಗೆರೆ ಎಳೆದಂತೆ ಆಯಾ ಶೈಕ್ಷಣಿಕ ವರ್ಷದ ಜೂನ್ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮ ಅವೈಜ್ಞಾನಿಕ. ಇದರಿಂದ ಲಕ್ಷಾಂತರ ಮಕ್ಕಳು ಒಂದನೇ ತರಗತಿ ಬದಲು ಪೂರ್ವ ಪ್ರಾಥಮಿಕ ತರಗತಿಯಲ್ಲಿಯೇ ಮತ್ತೊಂದು ವರ್ಷ ಕಳೆಯಬೇಕಿದೆ. ಈ ಹಿಂದೆ ಇದ್ದಂತೆ ಕನಿಷ್ಠ ಕೆಲವು ತಿಂಗಳ ವಿನಾಯಿತಿ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular