2023 -24 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಅರ್ಜಿ

ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಜನವರಿ 5 ರಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮಾರ್ಚ್ 12ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಚಿತ್ರದುರ್ಗ ಜಿಲ್ಲೆಯ ಯಾವುದೇ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮಗೆ ಸಮೀಪವಿರುವ ಜಿಲ್ಲೆಯ ಯಾವುದೇ ವಸತಿ ಶಾಲೆಗಳಿಗೆ ಭೇಟಿ ನೀಡಿ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ SATS ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಇತರೆ ಮೀಸಲಾತಿ ಅನ್ವಯವಾದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರಗಳು ಹಾಗೂ ವಿದ್ಯಾರ್ಥಿಯ ಇತ್ತೀಚಿನ ಪಾಸ್‍ಪೋರ್ಟ್ ಭಾವಚಿತ್ರ ಅವಶ್ಯಕವಾಗಿರುತ್ತವೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೇ ತಾವು ದಾಖಲಾಗಲು ಬಯಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಬೇಕು. ಅಭ್ಯರ್ಥಿಯ ಮೆರಿಟ್, ಮೀಸಲಾತಿ ಹಾಗೂ ಪ್ರವೇಶ ಬಯಸುವ ಶಾಲೆಗಳ ಆದ್ಯತಾ ಕ್ರಮದ ಮೇಲೆ Computerised Auto Selection  ಮೂಲಕ ಸೀಟು ಹಂಚಿಕೆ ಮಾಡಲಾಗುವುದು. ಜನವರಿ 22ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್ 12ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.

“ಮಾಹಿತಿ ಪುಸ್ತಕ-2023”ವನ್ನು ಪ್ರಾಧಿಕಾರದ ವೆಬ್‍ಸೈಟ್ www.kea.kar.nic.in ನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 080-23460460 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read