HomeKarnatakaಸಮವಸ್ತ್ರ ವಿತರಣೆಗೆ ನಿರ್ಲಕ್ಷ್ಯ: ಸರ್ಕಾರಕ್ಕೆ ಹೈಕೋರ್ಟ್ ಮತ್ತೆ ತೀವ್ರ ತರಾಟೆ

ಸಮವಸ್ತ್ರ ವಿತರಣೆಗೆ ನಿರ್ಲಕ್ಷ್ಯ: ಸರ್ಕಾರಕ್ಕೆ ಹೈಕೋರ್ಟ್ ಮತ್ತೆ ತೀವ್ರ ತರಾಟೆ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಿಸಿರುವ ಕುರಿತಾಗಿ ಅಗತ್ಯ ದಾಖಲೆಗಳ ಸಹಿತ ಮಾಹಿತಿ ನೀಡದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಸರಿ ಹೋಗುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದೆ. ಎರಡು ವಾರದಲ್ಲಿ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡಬೇಕು ಎಂದು 2019 ರ ಆಗಸ್ಟ್ 28ರಂದು ಹೈಕೋರ್ಟ್ ಆದೇಶ ಹೊರಡಿಸಿದ್ದರೂ ಪಾಲನೆಯಾಗಿಲ್ಲ. ವಿಳಂಬಕ್ಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಉನ್ನತ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದರೆ ಸಮವಸ್ತ್ರ ಹೇಗೆ ಬರುವುದಿಲ್ಲ ಎಂಬುದನ್ನು ನೋಡುತ್ತೇವೆ ಎಂದು ತರಾಟೆಗೆ ತೆಗೆದುಕೊಂಡಿದ್ದು, 2 ವಾರದಲ್ಲಿ ವರದಿ ಸಲ್ಲಿಸಲು ಸೂಚಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular