ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ: ಪ್ರಾಂಶುಪಾಲ, ನಿಲಯ ಪಾಲಕಿ ಅಮಾನತು

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಪೂರೈಕೆ ಹಾಗೂ ಕರ್ತವ್ಯ ಲೋಪ ಎಸಗಿದ  ಪ್ರಾಂಶುಪಾಲ  ಮಂಜುನಾಥ್ ಪುರದ್ ಹಾಗೂ ನಿಲಯ ಪಾಲಕಿ ನಸೀಮಾ ಬಾನು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಆದೇಶಿಸಿದ್ದಾರೆ.

ಈ ವಸತಿ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಉಪಹಾರ ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿರುವುದು ಕಂಡುಬಂದಿರುತ್ತದೆ. ತಕ್ಷಣ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿರುತ್ತದೆ. ಅಸ್ವಸ್ಥರಾಗಲು ವಿಷಪೂರಿತ ಆಹಾರ ಸೇವನೆ ಕಾರಣವಾಗಿದ್ದು, ಸರಿಯಾದ ನಿರ್ವಹಣೆ ಮಾಡದಿರುವುದು ಮತ್ತು ಸ್ವಚ್ಛತೆ ಕಾಪಾಡಿಕೊಳ್ಳದಿರುವುದು ಕಾರಣವಾಗಿದ್ದು, ಈ ಘಟನೆಗೆ ವಸತಿ ಶಾಲೆ ಪ್ರಾಂಶುಪಾಲರು ಮತ್ತು ನಿಲಯ ಪಾಲಕಿ ಅವರ ಕರ್ತವ್ಯ ನಿರ್ಲಕ್ಷ್ಯತೆ ಕಾರಣವಾಗಿದೆ ಎಂದು ಪರಿಗಣಿಸಿ ಅಮಾನತುಗೊಳಿಸಲಾಗಿದೆ.

ಹೆಚ್ಚುವರಿ ಪ್ರಭಾರ ವ್ಯವಸ್ಥೆ:

ಕಾಕನೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ನಿಲಯ ಪಾಲಕಿಯನ್ನು ಅಮಾನತುಗೊಳಿಸಿರುವುದರಿಂದ ಪ್ರಾಂಶುಪಾಲರನ್ನಾಗಿ ಮಾವಿನಹೊಳೆ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಂಶುಪಾಲರಾದ ಗುರುಮೂರ್ತಪ್ಪ ಅವರಿಗೆ ಹೆಚ್ಚುವರಿ ಪ್ರಭಾರ ವಹಿಸಿಕೊಳ್ಳಲು ಆದೇಶಿಸಲಾಗಿದೆ. ಮತ್ತು ನಿಲಯ ಪಾಲಕರಾಗಿ ಕಾಕನೂರು ವಸತಿ ಶಾಲೆಯ ಸ್ಟಾಫ್ ನರ್ಸ್ ಅನಿತಾ ಆರ್. ಅವರಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read