HomeKarnatakaಶಿಕ್ಷಕರಿಗೆ ಶಾಕ್: 15 ದಿನ ರಜೆ ಕಡಿತ: ಇಂದಿನಿಂದಲೇ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸಲು ಸೂಚನೆ

ಶಿಕ್ಷಕರಿಗೆ ಶಾಕ್: 15 ದಿನ ರಜೆ ಕಡಿತ: ಇಂದಿನಿಂದಲೇ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸಲು ಸೂಚನೆ

ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ 15 ದಿನ ರಜೆ ಕಡಿತ ಮಾಡಲಾಗಿದ್ದು, ಇಂದಿನಿಂದಲೇ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತರಾತುರಿಯಲ್ಲಿ ನಿರ್ದೇಶನ ನೀಡಿದೆ. ಇದಕ್ಕೆ ಶಿಕ್ಷಕರ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಜೂನ್ -ಜುಲೈನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನಿರ್ದೇಶನ ನೀಡಲಾಗಿದೆ.

ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷಾ ಪಲಿತಾಂಶ ಭಾರಿ ಕುಸಿತ ಕಂಡ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಮೇ 29 ರವರೆಗೆ ಬೇಸಿಗೆ ರಜೆ ಇದ್ದರೂ ಮೇ 15 ರಿಂದಲೇ ಶಾಲೆಗೆ ಬರುವಂತೆ ತಿಳಿಸಿದೆ. ಇದಕ್ಕೆ ಶಿಕ್ಷಕರ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular