ಕಲಬುರಗಿ: ಪಾಠ ಕೇಳುತ್ತಿದ್ದಾಗಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ.
ಶ್ರೀನಿವಾಸ್, ಕಾವೇರಿ ಹಾಗೂ ಅಕ್ಷತಾ ಗಾಯಗೊಂಡಿರುವ ವಿದ್ಯಾರ್ಥಿಗಳು. ಅದೃಷ್ಟವಶಾತ್ ವಿದ್ಯಾರ್ಥಿಗಳು, ಶಿಕ್ಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳು ವಿದ್ಯಾರ್ಥಿಗಳಿಬ್ಬರನ್ನು ಗುರುಮಿಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಒರ್ವ ವಿದ್ಯಾರ್ಥಿನಿಯನ್ನು ಯಾದಗಿರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.