HomeLatest NewsBREAKING: ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದ ಸರ್ಕಾರಿ ಶಾಲೆಯ ಮೇಲ್ಛಾವಣಿ: ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

BREAKING: ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದ ಸರ್ಕಾರಿ ಶಾಲೆಯ ಮೇಲ್ಛಾವಣಿ: ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕಲಬುರಗಿ: ಪಾಠ ಕೇಳುತ್ತಿದ್ದಾಗಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ.

ಶ್ರೀನಿವಾಸ್, ಕಾವೇರಿ ಹಾಗೂ ಅಕ್ಷತಾ ಗಾಯಗೊಂಡಿರುವ ವಿದ್ಯಾರ್ಥಿಗಳು. ಅದೃಷ್ಟವಶಾತ್ ವಿದ್ಯಾರ್ಥಿಗಳು, ಶಿಕ್ಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳು ವಿದ್ಯಾರ್ಥಿಗಳಿಬ್ಬರನ್ನು ಗುರುಮಿಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಒರ್ವ ವಿದ್ಯಾರ್ಥಿನಿಯನ್ನು ಯಾದಗಿರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular