HomeKarnatakaಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಮಂಗಳೂರು: ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ.

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ಪ್ರಯತ್ನದಿಂದ ಆರಂಭವಾದ ಶಾಲೆಯಲ್ಲಿ ಘಟನೆ ನಡೆದಿದೆ. ಸಿದ್ದಿಕ್, ಜಮೀಲಾ ದಂಪತಿಯ ಪುತ್ರಿ ಶಾಜಿಯಾ(7) ಮೃತಪಟ್ಟ ಬಾಲಕಿ. ಮೂರನೇ ತರಗತಿಯಲ್ಲಿ ಓದುತ್ತಿದ್ದ ಶಾಜಿಯಾ ಶಾಲೆಯಲ್ಲಿ ಎನ್ಎಸ್ಎಸ್ ಶಿಬಿರದಲ್ಲಿ ಭಾಗವಹಿಸಿದ್ದು, ಆಟವಾಡುವ ಸಂದರ್ಭದಲ್ಲಿ ಶಾಲೆಯ ಕಾಂಪೌಂಡ್ ಗೋಡೆ ಕುಸಿದು ಮೃತಪಟ್ಟಿದ್ದಾಳೆ.

ಈ ಭಾಗದಲ್ಲಿ ಭಾರಿ ಮಳೆಯಾಗಿದ್ದರಿಂದ ಕಾಂಪೌಂಡ್ ಗೋಡೆ ತೇವಗೊಂಡಿತ್ತು. ಗೇಟಿನ ಬಳಿ ಆಟವಾಡುವ ಸಂದರ್ಭದಲ್ಲಿ ಆವರಣ ಗೋಡೆ ಆಕೆಯ ಮೇಲೆ ಕುಸಿತು ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular