ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ತುಮಕೂರು: ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಯ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದೆ.

ಶಕುನಿ ತಿಮ್ಮನಹಳ್ಳಿ ಗ್ರಾಮದ ರಮೇಶ್ ಅವರ ಪುತ್ರ ಅಭಿಲಾಶ್(13) ಮೃತಪಟ್ಟ ವಿದ್ಯಾರ್ಥಿ. ಏಕಲವ್ಯ ವಸತಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದ ಅಭಿಲಾಶ್ ಸೋಮವಾರ ಮಧ್ಯಾಹ್ನ ಊಟವಾದ ನಂತರ ಅಸ್ವಸ್ಥಗೊಂಡಿದ್ದ. ಆತನಿಗೆ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾನೆ.

ಅಸ್ವಸ್ಥ ವಿದ್ಯಾರ್ಥಿಗೆ ಪ್ರಾಥಮಿಕ ಚಿಕಿತ್ಸೆ ಕೊಡದೆ ವಸತಿ ಶಾಲೆಯ ಪ್ರಾಚಾರ್ಯ ಮತ್ತು ವಾರ್ಡನ್ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದಾಗಿ ತಮ್ಮ ಮಗ ಮೃತಪಟ್ಟಿರುವುದಾಗಿ ಪೋಷಕರು ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read