HomeKarnatakaಮುಂಬಡ್ತಿ ನಿರೀಕ್ಷೆಯಲ್ಲಿದ್ದ ದೈಹಿಕ ಶಿಕ್ಷಕರಿಗೆ ಶಾಕ್: ಮುಖ್ಯ ಶಿಕ್ಷಕರ ಹುದ್ದೆ ನೀಡಲು ಸಾಧ್ಯವಿಲ್ಲ: ಸಚಿವ ಮಧು

ಮುಂಬಡ್ತಿ ನಿರೀಕ್ಷೆಯಲ್ಲಿದ್ದ ದೈಹಿಕ ಶಿಕ್ಷಕರಿಗೆ ಶಾಕ್: ಮುಖ್ಯ ಶಿಕ್ಷಕರ ಹುದ್ದೆ ನೀಡಲು ಸಾಧ್ಯವಿಲ್ಲ: ಸಚಿವ ಮಧು

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕರಾಗಿ ಮುಂಬಡ್ತಿ ನೀಡಲು ನಿಯಮದ ಪ್ರಕಾರ ಸಾಧ್ಯವಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ದೈಹಿಕ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಸಾಧ್ಯವಿಲ್ಲ. ಆದರೂ, ಪ್ರೊ. ಎಲ್.ಆರ್. ವೈದ್ಯನಾಥನ್ ವರದಿ ಆಧರಿಸಿ ಮುಂಬಡ್ತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಬೇರೆಯಾಗಿರುತ್ತದೆ. ಜೊತೆಗೆ ಸಹಶಿಕ್ಷಕರಿಗೆ ಬಿಎಡ್ ಪದವಿ ನಿಗದಿಪಡಿಸಲಾಗಿದ್ದರೆ, ದೈಹಿಕ ಶಿಕ್ಷಣ ಶಿಕ್ಷಕರು ಬಿಎಡ್ ಪದವಿ ಹೊಂದಿರುವುದಿಲ್ಲ. ಜೊತೆಗೆ ಶಿಕ್ಷಕರು ಬೋಧನೆಯಲ್ಲಿ ಅನುಭವ, ಪ್ರಾವೀಣ್ಯತೆ ಹೊಂದಿರುತ್ತಾರೆ. ಹೀಗಾಗಿ ದೈಹಿಕ ಶಿಕ್ಷಕರಿಗೆ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡಲು ನಿಯಮಾವಳಿ ಪ್ರಕಾರ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular