GOOD NEWS: ಸರ್ಕಾರಿ ಶಾಲೆಗಳ ರೀತಿ ರಾಜ್ಯದ ಎಲ್ಲಾ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ನೀರಿನ ವ್ಯವಸ್ಥೆ

ಸರ್ಕಾರಿ ಶಾಲೆಗಳ ರೀತಿಯಲ್ಲೇ ರಾಜ್ಯದ ಎಲ್ಲ ಸಾರ್ವಜನಿಕ ಗ್ರಂಥಾಲಯಗಳಿಗೂ ಉಚಿತವಾಗಿ ವಿದ್ಯುತ್‌ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯ ಸೇರಿದಂತೆ ಯಾವುದೇ ದೇಶದಲ್ಲಿ ಕನ್ನಡಿಗರಿಗೆ ಶೀಘ್ರವೇ ಡಿಜಿಟಲ್ ಗ್ರಂಥಾಲಯ ಸೇವೆ ಲಭ್ಯವಾಗಲಿದೆ. ಡಿಜಿಟಲ್ ಗ್ರಂಥಾಲಯ ಸೇವೆ ಈ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಬೇಕಿತ್ತು. ಆದರೆ ವಿವಿಧ ಲೋಪಗಳಿಂದಾಗಿ ಸಾಧ್ಯವಾಗಿಲ್ಲ. ಈಗಾಗಲೇ ಸಿದ್ಧಪಡಿಸಲಾದ ಸಾಫ್ಟ್ವೇರ್ ನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅದನ್ನೇ ಬಳಕೆ ಮಾಡಬೇಕೇ ಅಥವಾ ಹೊಸದನ್ನು ಬಳಕೆ ಮಾಡಬೇಕೆ ಎನ್ನುವ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read