ಅನಧಿಕೃತ ಶಾಲೆ ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ ಪರೀಕ್ಷೆಗೆ ತೊಂದರೆಯಾಗದಂತೆ ಕ್ರಮವಹಿಸಲು ಸೂಚನೆ

ಬೆಂಗಳೂರು: ಮಾನ್ಯತೆ ಪಡೆಯದ, ನವೀಕರಣ ಪಡೆಯದ ಅನಧಿಕೃತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ತೊಂದರೆಯಾಗದಂತೆ ಕ್ರಮ ವಹಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ.

ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆಯಾ ಜಿಲ್ಲೆಯ ಉಪನಿರ್ದೇಶಕರು ಮಾನ್ಯತೆ, ನವೀಕರಣ ಪಡೆಯದ ಅನಧಿಕೃತ ಶಾಲೆಗಳ ಮಾಹಿತಿಯನ್ನು ಮಂಡಳಿಗೆ ಸಲ್ಲಿಸಬೇಕು. ಅನಧಿಕೃತ ಶಾಲೆಗಳ ಕಾರಣಕ್ಕೆ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತೊಂದರೆಯಾದಲ್ಲಿ ಬಿಇಒ,  ಡಿಡಿಪಿಐಗಳನ್ನು ಹೊಣೆ ಮಾಡಲಾಗುವುದು. ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

ಅನಧಿಕೃತ ಶಾಲೆಗಳನ್ನು ಮುಚ್ಚಲು ಆದೇಶ ನೀಡಿದ್ದರೆ ಅಥವಾ ವಿದ್ಯಾರ್ಥಿಗಳ ಕೊರತೆಯಿಂದ ಶಾಲೆಗಳು ಮುಚ್ಚಿದಲ್ಲಿ ಅಂತಹ ಶಾಲೆಗಳ ಸಂಕೇತ ಸಂಖ್ಯೆಯನ್ನು ಮಂಡಳಿಗೆ ಸಲ್ಲಿಸಬೇಕು. ಬದಲಾದ ವಿದ್ಯಾರ್ಥಿಗಳ ಮಾಹಿತಿಯನ್ನು ಕೂಡಲೇ ಒದಗಿಸಬೇಕು ಎಂದು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read