HomeKarnatakaಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಾಕಿಂಗ್ ನ್ಯೂಸ್: ಶಾಲಾ ಶುಲ್ಕ ಶೇ. 30 - 40...

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಾಕಿಂಗ್ ನ್ಯೂಸ್: ಶಾಲಾ ಶುಲ್ಕ ಶೇ. 30 – 40 ರಷ್ಟು ಹೆಚ್ಚಳ…?

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮತ್ತೆ ಬರೆ ಬೀಳಲಿದೆ. ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡುವ ಅಧಿಕಾರ ಇಲ್ಲವೆಂದು ಹೈಕೋರ್ಟ್ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯದ ಖಾಸಗಿ ಶಾಲೆಗಳು 30 ರಿಂದ 40ರಷ್ಟು ಶುಲ್ಕ ಹೆಚ್ಚಳ ಮಾಡಲು ಮುಂದಾಗಿವೆ.

2022 -23ನೇ ಸಾಲಿನ ಶೈಕ್ಷಣಿಕ ವರ್ಷ ಮುಕ್ತಾಯವಾಗಿದ್ದು, ಅನೇಕ ಶಾಲೆಗಳಲ್ಲಿ 2023 -24ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಕಳೆದ ವರ್ಷಕ್ಕಿಂತ ಶಾಲಾ ಶುಲ್ಕದಲ್ಲಿ ಶೇಕಡ 30 ರಿಂದ 40 ರಷ್ಟು ಏರಿಕೆ ಮಾಡಲಾಗಿದೆ. ಈ ಕುರಿತಾಗಿ ಪೋಷಕರಿಗೆ ಮೆಸೇಜ್, ಇ-ಮೇಲ್ ಕಳುಹಿಸಿ ಕೆಲವೆಡೆ ಸೂಚನಾ ಫಲಕಗಳಲ್ಲಿಯೂ ಪ್ರಕಟಿಸಲಾಗಿದೆ. ಇದರಿಂದಾಗಿ ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುತ್ತಿರುವ ಪೋಷಕರಿಗೆ ಆರ್ಥಿಕ ಹೊರೆ ಹೆಚ್ಚಿದ್ದು, ಖಾಸಗಿ ಶಾಲೆಗಳ ವಿರುದ್ಧ ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular