HomeKarnatakaಶಾಲೆಗಳಲ್ಲಿ ಅನಗತ್ಯ ಓಡಾಟ, ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಪಡಿಸಿದರೆ ದೂರು ನೀಡಲು ಶಿಕ್ಷಣ ಇಲಾಖೆ ಸೂಚನೆ

ಶಾಲೆಗಳಲ್ಲಿ ಅನಗತ್ಯ ಓಡಾಟ, ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಪಡಿಸಿದರೆ ದೂರು ನೀಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಾಲೆ ಆವರಣದಲ್ಲಿ ಅನಗತ್ಯವಾಗಿ ಓಡಾಡುವವರು, ಸುರಕ್ಷತೆಗೆ ಭಂಗ ತರುವವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಶಾಲಾ ಶಿಕ್ಷಣ ಇಲಾಖೆ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.

ಶಾಲೆಗೆ ಸಂಬಂಧವಿಲ್ಲದ ಯಾವುದೇ ವ್ಯಕ್ತಿಗಳು ಶಾಲೆ ಆವರಣದಲ್ಲಿ ಅನಗತ್ಯವಾಗಿ ಓಡಾಡುವುದು, ಶಾಲಾ ಸುರಕ್ಷತೆಗೆ ಭಂಗ ತರುವಂತಹ ಅನಾಮತೆಯ ದೂರವಾಣಿ ಕರೆ, ಪತ್ರ ಬಂದರೆ, ಶೈಕ್ಷಣಿಕ ಚಟುವಟಿಕೆಗೆ ಯಾರಾದರೂ ಅಡ್ಡಿಪಡಿಸಿದಲ್ಲಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ಪೊಲೀಸರ ಗಮನಕ್ಕೆ ತರಬೇಕು. ಮಕ್ಕಳ ಸುರಕ್ಷತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಚಟುವಟಿಕೆಗಳಿಗೆ ಮಕ್ಕಳನ್ನು ಬಳಸಬಾರದು ಎಂದು ಈಗಾಗಲೇ ಸೂಚನೆ ನೀಡಿದೆ. ಶಾಲಾ ಅವರಣವನ್ನು ವ್ಯಾಯಾಮ, ಕ್ರೀಡೆ, ಪಾಠ ಪ್ರವಚನ ಮತ್ತಿತರ ಶೈಕ್ಷಣಿಕ ಉದ್ದೇಶಕ್ಕೆ ಮಾತ್ರ ಬಳಸಬೇಕೆಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular