HomeIndiaಇಂದು ತಮಿಳುನಾಡು, ಆಂಧ್ರದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ: ಶಾಲೆಗಳಿಗೆ ರಜೆ ಘೋಷಣೆ

ಇಂದು ತಮಿಳುನಾಡು, ಆಂಧ್ರದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ: ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ: ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾದಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಪ್ರದೇಶಗಳಲ್ಲಿ ಮಳೆ ಇದೇ 15ರವರೆಗೆ ಮುಂದುವರಿಯಲಿದೆ. ಇಂದು ನೈಋತ್ಯ ಬಂಗಾಳ ಕೊಲ್ಲಿಯ ಅನೇಕ ಭಾಗಗಳಲ್ಲಿ ಮತ್ತು ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯ ಪಕ್ಕದ ಪ್ರದೇಶಗಳಲ್ಲಿ, ಶ್ರೀಲಂಕಾ ಮತ್ತು ತಮಿಳುನಾಡಿನ ಕರಾವಳಿಯುದ್ದಕ್ಕೂ ಮತ್ತು ಅದರ ಹೊರಭಾಗದಲ್ಲಿ ಚಂಡಮಾರುತ ಹವಾಮಾನದ ಪರಿಸ್ಥಿತಿ ಇರಲಿದೆ. ಈ ಪ್ರದೇಶಗಳಿಗೆ ತೆರಳದಂತೆ ಮೀನುಗಾರರಿಗೆ ಐಎಂಡಿ ಸೂಚಿಸಿದೆ.

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಚೆನ್ನೈನ ಜಿಲ್ಲಾಧಿಕಾರಿ ರಶ್ಮಿ ಸಿದ್ಧಾರ್ಥ್ ಝಾಗಡೆ ಅವರು ಇಂದು ನಗರದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಇದು ತಮಿಳುನಾಡಿನ ಹಲವು ಭಾಗಗಳಲ್ಲಿ ಮಳೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ(IMD) ಯೆಲ್ಲೋ ಅಲರ್ಟ್ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ದಿನಗಳಲ್ಲಿ ವಿಶೇಷವಾಗಿ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಕೆಲವು ಹಿಂಗಾರು ಮಳೆಯೊಂದಿಗೆ ಭಾರೀ ಮಳೆ ಮುಂದುವರೆಯಲಿದೆ ಎಂದು IMD ಎಚ್ಚರಿಸಿದೆ. ಹವಾಮಾನ ಬುಲೆಟಿನ್ ಪ್ರಕಾರ, ನವೆಂಬರ್ 12 ರಂದು 12 ಜಿಲ್ಲೆಗಳು, ನವೆಂಬರ್ 13 ರಂದು 17 ಜಿಲ್ಲೆಗಳು, ನವೆಂಬರ್ 14 ರಂದು 27 ಜಿಲ್ಲೆಗಳು ಮತ್ತು ನ. 15 ರಂದು 25 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular