ಭಾರಿ ಮಳೆ ಹಿನ್ನಲೆ ವಿವಿಧೆಡೆ ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲಾಡಳಿತದಿಂದ ರಜೆ ಘೋಷಿಸಿದ್ದು, ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಈ ಮೂರು ತಾಲೂಕುಗಳಲ್ಲಿ ಶಾಲೆಗಳು ಹಾಗೂ ಪಿಯುಸಿ ಕಾಲೇಜುಗಳಿಗೆ ರಜೆ ನೀಡಿ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read