HomeKarnatakaರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಜ. 22ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ಬದಲು ನೇರ ಪ್ರಸಾರಕ್ಕೆ...

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಜ. 22ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ಬದಲು ನೇರ ಪ್ರಸಾರಕ್ಕೆ ಅವಕಾಶ ನೀಡಲು ಸಲಹೆ

ಬೆಂಗಳೂರು: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ದಿನವಾದ ಜನವರಿ 22ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ನೀಡುವ ಬದಲಿಗೆ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರಕ್ಕೆ ಅವಕಾಶ ನೀಡುವುದು ಒಳ್ಳೆಯದು ಎಂದು ಖಾಸಗಿ ಶಾಲಾ ಸಂಘಟನೆ ಕ್ಯಾಮ್ಸ್ ಸಲಹೆ ನೀಡಿದೆ.

ಸಂಘಟನೆಯ ಕಾರ್ಯದರ್ಶಿ ಡಿ. ಶಶಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ನೇರ ಪ್ರಸಾರ ವ್ಯವಸ್ಥೆಯ ಜೊತೆಗೆ ರಾಜಕೀಯ ಹೊರಗಿಟ್ಟು, ಧಾರ್ಮಿಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಮನೋಭಾವಕ್ಕೆ ಒತ್ತು ಕೊಡುವ ರೀತಿಯಲ್ಲಿ ಆಯಾ ಶಿಕ್ಷಣ ಸಂಸ್ಥೆಗಳು ಕಾರ್ಯಕ್ರಮ ರೂಪಿಸಬಹುದು ಎಂದು ಹೇಳಿದ್ದು, ಜನವರಿ 22ರಂದು ರಾಜ್ಯದಲ್ಲಿ ಶಾಲೆಗೆ ರಜೆ ನೀಡುವ ಬದಲು ನೇರ ಪ್ರಸಾರ ವೀಕ್ಷಣೆಗೆ ಅವಕಾಶ ನೀಡಬೇಕೆಂದು ಸಲಹೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular