HomeKarnatakaಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಅನುದಾನಿತ ಶಾಲೆಗಳಲ್ಲಿ 3794 ಶಿಕ್ಷಕರ ನೇಮಕ

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಅನುದಾನಿತ ಶಾಲೆಗಳಲ್ಲಿ 3794 ಶಿಕ್ಷಕರ ನೇಮಕ

ಬೆಂಗಳೂರು: ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 5120 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. 3794 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ಪಡೆದು ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಾ.ವೈ.ಎ. ನಾರಾಯಣಸ್ವಾಮಿ ಅವರು ರಾಜ್ಯದಲ್ಲಿನ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಂತೆ ಸರ್ಕಾರದ ಗಮನ ಸೆಳೆದಾಗ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನುದಾನಿತ ಶಾಲೆಗಳಿಗೆ 1,326 ಬೋಧಕ ಹುದ್ದೆಗಳ ಬರ್ತಿಗೆ 2015ರ ಹಿಂದೆ ಅನುಮತಿ ನೀಡಲಾಗಿದ್ದು, ಖಾಸಗಿ ಶಾಲೆಗಳ ಕೆಲವು ನಿಯಮಗಳಿಂದಾಗಿ ಹುದ್ದೆಗಳು ಭರ್ತಿಯಾಗಿಲ್ಲ. ಅವುಗಳೊಂದಿಗೆ ಇದೀಗ ಖಾಲಿಯಾದ 3794 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕಿದೆ. ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಖಾಲಿ ಹುದ್ದೆ ಭರ್ತಿಗೆ ಅನುಮತಿ ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular