HomeKarnatakaಶಾಲಾ, ಕಾಲೇಜುಗಳಲ್ಲಿ ಮೊಬೈಲ್ ನಿಷೇಧ: ಬಳಸಿದರೆ ಮುಟ್ಟುಗೋಲು

ಶಾಲಾ, ಕಾಲೇಜುಗಳಲ್ಲಿ ಮೊಬೈಲ್ ನಿಷೇಧ: ಬಳಸಿದರೆ ಮುಟ್ಟುಗೋಲು

ಬೆಂಗಳೂರು: ಶಿಕ್ಷಣ ಸಚಿವರ ಸೂಚನೆ ಮೇರೆಗೆ ಶಾಲಾ, ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ.

ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ(1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ.

ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೊಬೈಲ್ ನಿಷೇದವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಜವಾಬ್ದಾರಿ/ಅಧಿಕಾರ ವ್ಯಾಪ್ತಿ ನಿಗದಿಪಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular