HomeIndiaSHOCKING: ಶಾಲೆಯಲ್ಲೇ ಪ್ರಾಂಶುಪಾಲ, ಶಿಕ್ಷಕರಿಂದಲೇ ಅತ್ಯಾಚಾರ: ಸೋದರ ಸಂಬಂಧಿ ಸೇರಿ ನಾಲ್ವರು ಅರೆಸ್ಟ್

SHOCKING: ಶಾಲೆಯಲ್ಲೇ ಪ್ರಾಂಶುಪಾಲ, ಶಿಕ್ಷಕರಿಂದಲೇ ಅತ್ಯಾಚಾರ: ಸೋದರ ಸಂಬಂಧಿ ಸೇರಿ ನಾಲ್ವರು ಅರೆಸ್ಟ್

ಚಿತ್ರಕೂಟ: ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ, ಇಬ್ಬರು ಶಿಕ್ಷಕರು ಸೇರಿ 4 ಮಂದಿಯನ್ನು ಬಂಧಿಸಲಾಗಿದೆ

17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ನಾಲ್ವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತೆ 10 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಐದು ತಿಂಗಳ ಕಾಲ ಶಾಲೆಯೊಳಗೆ ಹಲವಾರು ಬಾರಿ ಶಿಕ್ಷಕರು ಮತ್ತು ಪ್ರಾಂಶುಪಾಲರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾಳೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ವೃಂದಾ ಶುಕ್ಲಾ ಹೇಳಿದ್ದಾರೆ.

ಈ ಸಂಬಂಧ ಜುಲೈ 26 ರಂದು ಎಫ್‌ಐಆರ್ ದಾಖಲಿಸಲಾಗಿದ್ದು, ವಿಚಾರಣೆ ನಂತರ ಪೊಲೀಸರು ಆರೋಪಿಗಳಾದ ಇರ್ಷಾದ್, ಮುಯಿನ್ ಮತ್ತು ಆದಿತ್ಯರನ್ನು ಬಂಧಿಸಿದ್ದಾರೆ.

ಸಂಚು ರೂಪಿಸಿ ಬಾಲಕಿಯನ್ನು ಶಿಕ್ಷಕರ ಬಳಿ ಕರೆದೊಯ್ದ ಆರೋಪ ಹೊತ್ತಿರುವ ಬಾಲಕಿಯ ಸೋದರ ಸಂಬಂಧಿಯನ್ನೂ ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular