HomeKarnatakaಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬೇಸಿಗೆ ರಜೆ ಅಂತ್ಯ, ಶಾಲೆ ಪುನಾರಂಭ: ಮೊದಲ ದಿನವೇ ಸಮವಸ್ತ್ರ,...

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬೇಸಿಗೆ ರಜೆ ಅಂತ್ಯ, ಶಾಲೆ ಪುನಾರಂಭ: ಮೊದಲ ದಿನವೇ ಸಮವಸ್ತ್ರ, ಪುಸ್ತಕ

ಬೆಂಗಳೂರು: ಬೇಸಿಗೆ ರಜೆ ಅಂತ್ಯವಾಗಿದ್ದು, ಸರ್ಕಾರದ 2023 -24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ 31 ರಿಂದ ರಾಜ್ಯದ್ಯಂತ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭವಾಗಲಿವೆ.

ಮೇ 29 ಮತ್ತು 30 ರಂದು ಶಾಲೆಗಳನ್ನು ಸ್ವಚ್ಛಗೊಳಿಸಿ ಸುರಕ್ಷತೆ ಕ್ರಮ ಪರಿಶೀಲಿಸಿ ಸಿದ್ಧಪಡಿಸಿಕೊಂಡು ಶಾಲೆ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಕೆಲವು ಖಾಸಗಿ ಶಾಲೆಗಳು ಸೋಮವಾರದಿಂದಲೇ ಆರಂಭವಾಗಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 11ರಿಂದ ಮೇ 28ರ ವರೆಗೆ ಸುಮಾರು ಎರಡು ತಿಂಗಳ ಕಾಲ ಬೇಸಿಗೆ ರಜೆ ನೀಡಲಾಗಿದ್ದು, ರಜೆ ಮುಕ್ತಾಯವಾಗಿದೆ. ತರಗತಿ ಕೊಠಡಿ, ಶಾಲೆ ಆವರಣ, ಆಟದ ಮೈದಾನ, ಲೈಬ್ರರಿ ಸೇರಿ ಇಡಿ ಶಾಲೆಯನ್ನು ಸ್ವಚ್ಛಗೊಳಿಸಿ ಮಕ್ಕಳು ಕುಳಿತುಕೊಂಡು ಪಾಠ ಕೇಳಲು ಆರೋಗ್ಯಕರ ರೀತಿಯಲ್ಲಿ ಶಾಲೆಗಳನ್ನು ಸಜ್ಜುಗೊಳಿಸಲು ಸೂಚನೆ ನೀಡಲಾಗಿದೆ.

ಶಾಲೆಯ ಶೌಚಾಲಯ, ಕಾಂಪೌಂಡ್, ಶಾಲಾ ಕೊಠಡಿ ಸೇರಿದಂತೆ ಯಾವುದೇ ಭಾಗ ಮಳೆ ಇತರೆ ಕಾರಣಗಳಿಂದ ಹಾನಿಯಾಗಿದ್ದರೆ ಅವುಗಳ ದುರಸ್ತಿಗೆ ಕ್ರಮ ವಹಿಸಿ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಹೇಳಲಾಗಿದೆ.

ಈಗಾಗಲೇ ಶಾಲೆಗಳಿಗೆ ಶೇಕಡ 95 ರಷ್ಟು ಪಠ್ಯಪುಸ್ತಕ, ಸಮಾವಸ್ತ್ರ ಪೂರೈಕೆಯಾಗಿದೆ. ಶಾಲೆ ಆರಂಭದ ಮೊದಲ ದಿನವೇ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಶಾಲೆ ಆರಂಭದ ದಿನ ತಳಿರು ತೋರಣಗಳಿಂದ ಶಾಲೆಯನ್ನು ಸಿಂಗರಿಸಿ ಮಕ್ಕಳಿಗೆ ಸಿಹಿ, ಗುಲಾಬಿ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಗುವುದು. ಬಿಸಿಯುಟದಲ್ಲಿ ಒಂದು ಸಿಹಿ ತಿನಿಸು ತಯಾರಿಸಿ ಮಕ್ಕಳಿಗೆ ಬಡಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular