HomeKarnatakaದಸರಾ ರಜೆ ಮುಕ್ತಾಯ: ರಾಜ್ಯಾದ್ಯಂತ ಇಂದಿನಿಂದ ಶಾಲೆ ಪುನಾರಂಭ, ಕೆಲವು ಜಿಲ್ಲೆಗಳಲ್ಲಿ ರಜೆ ಮುಂದುವರಿಕೆ

ದಸರಾ ರಜೆ ಮುಕ್ತಾಯ: ರಾಜ್ಯಾದ್ಯಂತ ಇಂದಿನಿಂದ ಶಾಲೆ ಪುನಾರಂಭ, ಕೆಲವು ಜಿಲ್ಲೆಗಳಲ್ಲಿ ರಜೆ ಮುಂದುವರಿಕೆ

ಬೆಂಗಳೂರು: ದಸರಾ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಲಿವೆ. ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ದಸರಾ ರಜೆ ಮುಕ್ತಾಯವಾಗಿದ್ದು, ಅಕ್ಟೋಬರ್ 25ರ ಇಂದಿನಿಂದ ಶಾಲೆಗಳು ಶುರುವಾಗಲಿವೆ.

ಶೈಕ್ಷಣಿಕ ವೇಳಾಪಟ್ಟಿ ಅನ್ವಯ ಎರಡನೆಯ ಅವಧಿಯ ಶಾಲಾ ಕರ್ತವ್ಯ ದಿನಗಳು ಇಂದಿನಿಂದ ಆರಂಭವಾಗಿ 2024ರ ಏಪ್ರಿಲ್ 10ರವರೆಗೆ ನಡೆಯಲಿವೆ. ಪ್ರಸ್ತುತ ನೀಡಿದ ರಜೆ ಮುಂದುವರಿಸಬೇಕೆಂದು ಶಿಕ್ಷಕರ ಸಂಘಟನೆಗಳು ಒತ್ತಾಯ ಮಾಡಿದ್ದವು. ಆದರೆ, ರಜೆ ಮುಂದುವರೆಸುವ ಕುರಿತು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ದಸರಾ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳು ಆರಂಭವಾಗಲಿವೆ. ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಕೂಡ ರಜೆ ಮುಂದುವರೆದಿದ್ದು, ನಾಳೆಯಿಂದ ಶಾಲೆಗಳು ಆರಂಭವಾಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular