ಬೆಂಗಳೂರು : ಬೇಸಿಗೆ ರಜೆ ಬಳಿಕ ರಾಜ್ಯಾದ್ಯಂತ ಶಾಲೆ ಆರಂಭವಾಗಿದೆ. ಕೆಲವು ಕಡೆ ಮೇ 29 ರಿಂದ ಶಾಲೆಗಳು ಆರಂಭವಾಗಿದ್ರೆ, ಕೆಲವು ಕಡೆ ಇಂದಿನಿಂದ ಶಾಲೆಗಳು ಆರಂಭವಾಗಿದೆ. ಕೊರೊನಾ ಆತಂಕದ ನಡುವೆ ಶಾಲೆ ಶುರುವಾಗಿದೆ.
ಶಿಕ್ಷಣ ಇಲಾಖೆ ಕಳೆದ ತಿಂಗಳು 2025-26 ಶೈಕ್ಷಣಿಕ ಸಾಲಿನ ಶಾಲಾ ಕರ್ತವ್ಯದ ದಿನಗಳು, ರಜಾ ಅವಧಿಯ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಶಿಕ್ಷಕರು , ಪೋಷಕರಿಗಾಗಿ ಇಲ್ಲಿದೆ ಮಾಹಿತಿ.
ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಟಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ.



