HomeLatest NewsBIG NEWS: ಶಾಲಾ ಕಟ್ಟಡದಿಂದ ಜಿಗಿದು 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

BIG NEWS: ಶಾಲಾ ಕಟ್ಟಡದಿಂದ ಜಿಗಿದು 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಮುಂಬೈ: ಶಾಲಾ ಕಟ್ಟಡದಿಂದ ಜಿಗಿದು 8 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಜಲ್ನಾದಲ್ಲಿ ಈ ಘಟನೆ ನಡೆದಿದೆ. ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿ ಶಾಲೆಯ ಕಟ್ಟಡದ ಮೂರನೇ ಮಹಡಿಯಿದ ಹಾರಿದ್ದು, ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಬಾಲಕಿ ಸಾವನ್ನಪ್ಪಿದ್ದಳು.

ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಯಿಂದ ಶಾಲೆಯ ಇತರ ವಿದ್ಯಾರ್ಥಿಗಳು, ಪೋಷಕರು ಆತಂಕಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕರ ನಿರಂತರ ಮಾನಸಿಕ ಕಿರುಕುಳಕ್ಕೆ ನೊಂದು ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಾಲಕಿ ತಂದೆ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular