HomeKarnatakaಶಾಲೆಯಲ್ಲೇ ಆಘಾತಕಾರಿ ಘಟನೆ: ಸಾಂಬಾರ್ ಚೆಲ್ಲಿದ್ದಕ್ಕೆ ಜಗಳ, ವಿದ್ಯಾರ್ಥಿಗೆ ಚಾಕುವಿನಿಂದ ಹಲ್ಲೆ

ಶಾಲೆಯಲ್ಲೇ ಆಘಾತಕಾರಿ ಘಟನೆ: ಸಾಂಬಾರ್ ಚೆಲ್ಲಿದ್ದಕ್ಕೆ ಜಗಳ, ವಿದ್ಯಾರ್ಥಿಗೆ ಚಾಕುವಿನಿಂದ ಹಲ್ಲೆ

ಮಂಗಳೂರು: ಶಾಲೆಯಲ್ಲಿ ಸಾಂಬಾರ್ ಚೆಲ್ಲಿದ ವಿಚಾರಕ್ಕೆ ಜಗಳವಾಗಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಲಾಗಿದೆ.

ಮಂಗಳೂರಿನ ಮುಡಿಪು ಸಮೀಪದ ನರಿಂಗಾನ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಬುಧವಾರ ಮಧ್ಯಾಹ್ನ ಘಟನೆ ನಡೆದಿದೆ. ಬಿಸಿಯೂಟದ ವೇಳೆ ಬಟ್ಟೆಗೆ ಸಾಂಬಾರ್ ಚೆಲ್ಲಿದ ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ವಿದ್ಯಾರ್ಥಿಯೊಬ್ಬ ಮತ್ತೊಬ್ಬ ವಿದ್ಯಾರ್ಥಿ ಮೇಲೆ ಚಾಕು ಎಸೆದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಊಟದ ವೇಳೆ ವಿದ್ಯಾರ್ಥಿಯ ತಟ್ಟೆಯಿಂದ ಮತ್ತೊಬ್ಬ ವಿದ್ಯಾರ್ಥಿಯ ಅಂಗಿ ಮೇಲೆ ಸಾಂಬಾರ್ ಚೆಲ್ಲಿದೆ. ಆಕ್ರೋಶಗೊಂಡ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿ ಆತನ ನೋಟ್ ಪುಸ್ತಕವನ್ನು ಸಾಂಬಾರ್ ಗೆ ಹಾಕಿದ್ದಾನೆ. ಪೆಟ್ಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಚೂರಿ ತೆಗೆದು ಹಲ್ಲೆ ನಡೆಸಿದ ವಿದ್ಯಾರ್ಥಿ ಮೇಲೆ ಎಸೆದಿದ್ದಾನೆ. ಆತನ ಎದೆ ಭಾಗದ ಪಕ್ಕಕ್ಕೆ ಚೂರಿ ಚುಚ್ಚಿ ಗಾಯಗೊಂಡಿದ್ದು, ತಕ್ಷಣವೇ ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular