HomeKarnataka1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 30ರೊಳಗೆ ಶೂ ವಿತರಣೆ

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 30ರೊಳಗೆ ಶೂ ವಿತರಣೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 30ರೊಳಗೆ ಒಂದು ಜೊತೆ ಉಚಿತ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸಲು ಸರ್ಕಾರ ಸೂಚನೆ ನೀಡಿದೆ.

ಶಿಕ್ಷಣ ಇಲಾಖೆ ವತಿಯಿಂದ ಎಲ್ಲಾ ಜಿಲ್ಲಾ ಉಪನಿರ್ದೇಶಕರು ಮತ್ತು ಬಿಇಒಗಳಿಗೆ ಜುಲೈ 30ರೊಳಗೆ ವಿದ್ಯಾರ್ಥಿಗಳಿಗೆ ಒಂದು ಜೊತೆ ಉಚಿತ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸಲು ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳೀಯವಾಗಿ ಶೋ ಮತ್ತು ಸಾಕ್ಸ್ ಗಳನ್ನು ಖರೀದಿಸಿ ವಿತರಿಸುವ ಜವಾಬ್ದಾರಿಯನ್ನು ಆಯಾ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ ನೀಡಲಾಗಿದ್ದು, ಖರೀದಿ ಪ್ರಕ್ರಿಯೆಗೆ ಷರತ್ತು ವಿಧಿಸಲಾಗಿದೆ.

ಒಂದರಿಂದ ಐದನೇ ತರಗತಿ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ 265 ರೂ., ಆರರಿಂದ ಎಂಟನೇ ತರಗತಿ ಮಕ್ಕಳಿಗೆ 295 ರೂ., 9, 10ನೇ ತರಗತಿ ಮಕ್ಕಳಿಗೆ 325 ರೂ. ನಿಗದಿಪಡಿಸಲಾಗಿದ್ದು, ಶೂ ಬೇಡ ಎನ್ನುವುದಾದಲ್ಲಿ ಆಯಾ ಭಾಗದ ಪರಿಸರಕ್ಕೆ ತಕ್ಕಂತೆ ಚಪ್ಪಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular