ಬೆಂಗಳೂರು: ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಇನ್ಮುಂದೆ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಶಾಲಾ ಮಕ್ಕಳು ಶೌಚಾಲಯ ಕ್ಲೀನ್ ಮಾಡುವಂತಿಲ್ಲ ಈ ಬಗ್ಗೆ ಈ ಹಿಂದೆಯೇ ಶಿಕ್ಷಣ ಆದೇಶ ಹೊರಡಿಸಿದ್ದರೂ ರಾಜ್ಯದ ವಿವಿಧ ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಪ್ರಕರಣ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈಬಾರಿ ಕಠಿಣ ಕ್ರಮಕ್ಕೆ ಮುಂದಾಗಿದೆ.
ಶೌಚಾಲಯ ಕ್ಲೀನ್ ಮಾಡಿಸುವ ಶಿಕ್ಷಕರ ವಿರುದ್ಧ ಮತ್ತು ಸಂಧಿಸಿದ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗುವುದು. ಶಾಲೆಯಲ್ಲಿ ಮಕ್ಕಳಿಂದ ಸ್ವಚ್ಛತೆ ಮಾಡಿಸಿದರೆ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಹಾಗೂ ಸಂಬಂಧಿಸಿದ ಅಧಿಕರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಹೊರಡಿಸಿದೆ.