HomeLatest Newsಭರವಸೆ ಈಡೇರಿಸದ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಹೋರಾಟಕ್ಕೆ ಶಾಲಾ ಶಿಕ್ಷಕರ ನಿರ್ಧಾರ

ಭರವಸೆ ಈಡೇರಿಸದ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಹೋರಾಟಕ್ಕೆ ಶಾಲಾ ಶಿಕ್ಷಕರ ನಿರ್ಧಾರ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಮತ್ತು ಇತರ ಸೇವಾ ಜೇಷ್ಠತೆ ಬೇಡಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನೀಡಿದ್ದ ಭರವಸೆ ಈಡೇರದ ಹಿನ್ನೆಲೆಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯವ್ಯಾಪಿ ಹಂತ ಹಂತವಾಗಿ ಹೋರಾಟ ನಡೆಸಲು ತೀರ್ಮಾನ ಕೈಗೊಂಡಿದೆ.

ಆಗಸ್ಟ್ 12ರಂದು ಪ್ರತಿ ಜಿಲ್ಲಾ ಕೇಂದ್ರದಲ್ಲಿ ಮತ್ತು ತಾಲೂಕಿನಲ್ಲಿ ಎಲ್ಲ ಜಿಲ್ಲೆ ಪ್ರದಾಧಿಕಾರಿಗಳು, ಪ್ರತಿನಿಧಿಗಳು, ನಾಮ ನಿರ್ದೇಶಕ ಪದಾಧಿಕಾರಿಗಳು ಸೇರಿ ಜಿಲ್ಲಾಧಿಕಾರಿಗಳು ಮತ್ತು ಡಿಡಿಪಿಐಗಳ ಮೂಲಕ ಮುಖ್ಯಮಂತ್ರಿ, ಶಿಕ್ಷಣ ಸಚಿವರು, ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬೇಡಿಕೆ ಒಳಗೊಂಡ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.

ಆಗಸ್ಟ್ 27ರವರೆಗೆ ಬೇಡಿಕೆ ಈಡೇರಿಸದಿದ್ದರೆ ಸೆಪ್ಟೆಂಬರ್ 3ರಂದು ರಾಜ್ಯದ ಎಲ್ಲಾ ಶಿಕ್ಷಕರು ಸಾಂದರ್ಭಿಕ ರಜೆ ಹಾಕಿ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯಮಟ್ಟದ ಬೃಹತ್ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular