HomeKarnatakaಶಾಲಾ ಸಮಯ ಬದಲಾವಣೆಗೆ ಪೋಷಕರು, ಆಡಳಿತ ಮಂಡಳಿ ವಿರೋಧ: ಹೈಕೋರ್ಟ್ ಗೆ ಇಂದು ವರದಿ ಸಲ್ಲಿಕೆ

ಶಾಲಾ ಸಮಯ ಬದಲಾವಣೆಗೆ ಪೋಷಕರು, ಆಡಳಿತ ಮಂಡಳಿ ವಿರೋಧ: ಹೈಕೋರ್ಟ್ ಗೆ ಇಂದು ವರದಿ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರದ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಹೈಕೋರ್ಟ್ ಸೂಚನೆಯಂತೆ ಶಾಲಾ ಸಮಯ ಬದಲಾಗಿ ಕುರಿತಾಗಿ ಶಿಕ್ಷಣ ಇಲಾಖೆ ಮಹತ್ವದ ಸಭೆ ನಡೆಸಿದೆ.

ಶಾಲಾ ಸಮಯ ಬದಲಾವಣೆಗೆ ಸಭೆಯಲ್ಲಿ ವಿರೋಧ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಶಾಲೆಗಳ ಕಾರ್ಯ ಚಟುವಟಿಕೆಗೆ ಪ್ರಸ್ತುತ ಇರುವ ಸಮಯದಲ್ಲಿ ಬದಲಾವಣೆ ಮಾಡುವುದು ಸರಿಯಲ್ಲ. ಸಮಯ ಬದಲಾವಣೆ ಮಾಡಿದಲ್ಲಿ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚಾಗುತ್ತದೆ. ಹೀಗಾಗಿ ಹಾಲಿ ಸಮಯವನ್ನೇ ಮುಂದುವರೆಸಬೇಕು ಎಂದು ಪೋಷಕರು, ಶಾಲೆಗಳ ಆಡಳಿತ ಮಂಡಳಿ ಸೇರಿದಂತೆ ಎಲ್ಲಾ ಭಾಗಿದಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಣ ಇಲಾಖೆ ಬೆಂಗಳೂರಿನ ಶಾಲೆಗಳ ಸಮಯ ಪರಿಷ್ಕರಣೆ ಸಂಬಂಧ ಸಲಹೆ ಅಭಿಪ್ರಾಯಗಳನ್ನು ಪಡೆಯಲು ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಎಲ್ಲಾ ಭಾಗಿದಾರರು ಶಾಲಾ ಸಮಯದಲ್ಲಿ ಬದಲಾವಣೆ ಮಾಡಬಾರದು. ಸಂಚಾರದಟ್ಟಣೆ ಸಮಸ್ಯೆ ನಿವಾರಣೆಗೆ ಪರ್ಯಾಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯವನ್ನು ಇಂದು ಕೋರ್ಟ್ ಗೆ ತಿಳಿಸಲಿದ್ದು, ಕೋರ್ಟ್ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular