HomeKarnatakaBIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಮೈಸೂರು: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಬೆಳಗಾವಿಯ ಶಾಲೆಯೊಂದರ ಮಕ್ಕಳು ಬಸ್ ನಲ್ಲಿ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುತಿದ್ದಾಗ ಬಸ್ ಮೈಸೂರಿನ ಫೌಂಟೇನ್ ವೃತ್ತದ ಬಳಿ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದಿದೆ.

ಅಪಘಾತದಲ್ಲಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ಮೈಸುರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ನಲ್ಲಿ ಒಟ್ಟು 30 ಮಕ್ಕಳು ಇದ್ದರು ಎನ್ನಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದ ಶಾಂತಿನಿಕೇತನ ಶಾಲೆಯ ಮಕ್ಕಳು ಶಿಕ್ಷಕರೊಂದಿಗೆ ಮೈಸೂರು ಪ್ರವಾಸಕ್ಕಾಗಿ ತೆರಳಿದ್ದರು. ಈ ವೇಳೆ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular