ಕಾರವಾರ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ಕಾರು ರಸ್ತೆ ಬದಿ ನಿಂತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಚಾಲಕ ಹಾಗೂ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಈ ಘಟನೆ ನಡೆದಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ಕಾರು ಚಾಲಕನಿಗೆ ಇದ್ದಕ್ಕಿದ್ದಂತೆ ತಲೆ ಸುತ್ತು ಬಂದಂತಾಗಿದ್ದು, ನಿಯಂತ್ರಣ ತಪ್ಪಿ ಓಮ್ನಿ ರಸ್ತೆ ಬದಿ ನಿಂತಿದ್ದ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಓಮ್ನಿ ಚಾಲಕ ಹಾಗೂ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಕುಮಟಾ ಪಟ್ಟಣದ ಡಾ.ಎ.ವಿ.ಬಾಳಿಗಾ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಎಂದು ತಿಳಿದುಬಂದಿದೆ.

