HomeKarnatakaಶಾಲಾ ವ್ಯಾನ್ ನಲ್ಲಿ ಇಬ್ಬರು ಬಾಲಕಿಯರಿಗೆ ಚಾಲಕನಿಂದ ಲೈಂಗಿಕ ದೌರ್ಜನ್ಯ

ಶಾಲಾ ವ್ಯಾನ್ ನಲ್ಲಿ ಇಬ್ಬರು ಬಾಲಕಿಯರಿಗೆ ಚಾಲಕನಿಂದ ಲೈಂಗಿಕ ದೌರ್ಜನ್ಯ

ಪುಣೆ: ಶಾಲಾ ಬಾಲಕಿಯರಿಬ್ಬರ ಮೇಲೆ ಶಾಲಾ ವ್ಯಾನ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಶಾಲಾ ವಾಹನದಲಿಯೇ ಆರೋಪಿ ಬಾಲಕಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಪ್ರಕರಣ ಸಂಬಂಧ 45 ವರ್ಷದ ಸ್ಕೂಲ್ ವ್ಯಾನ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಸೆ.30ರಂದು ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ತನ್ನ ತಾಯಿ ಬಳಿ ವಿಷಯ ತಿಳಿಸಿದ್ದು, ಬಳಿಕ ಬಾಲಕಿಯರ ಪೋಷಕರು ವಾನ್ವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂದ್ಜಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular