HomeIndiaಮಕ್ಕಳು ಪಾಠ ಕೇಳುತ್ತಿರುವಾಗಲೇ ಏಕಾಏಕಿ ಕುಸಿದ ಶಾಲೆಯ ಗೋಡೆ; ಓರ್ವ ವಿದ್ಯಾರ್ಥಿ ಗಂಭೀರ ಗಾಯ

ಮಕ್ಕಳು ಪಾಠ ಕೇಳುತ್ತಿರುವಾಗಲೇ ಏಕಾಏಕಿ ಕುಸಿದ ಶಾಲೆಯ ಗೋಡೆ; ಓರ್ವ ವಿದ್ಯಾರ್ಥಿ ಗಂಭೀರ ಗಾಯ

ವಡೋದರಾ: ಮಳೆ ಅಬ್ಬರಕ್ಕೆ ಖಾಸಗಿ ಶಾಲೆಯ ಗೋಡೆ ಕುಸಿದು ಬಿದ್ದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ.

ಮಕ್ಕಳು ತರಗತಿಗಳಲ್ಲಿ ಪಾಠ ಕೇಳುತ್ತಿದ್ದ ವೇಳೆಯೇ ಏಕಾಏಕಿ ಶಾಲೆಯ ಗೋಡೆ ಕುಸಿದು ಬಿದ್ದಿದೆ. ಜೀವ ಉಳಿಸಿಕೊಳ್ಳಲು ಮಕ್ಕಳು ಬೇಂಚ್, ಡೆಸ್ಕ್ ಗಳನ್ನು ಹತ್ತಿ ಓಡಿ, ಕ್ಲಾಸ್ ರೂಮ್ ನಿಂದ ಹೊರಬಂದಿದ್ದಾರೆ.

ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಡೋದರಾದ ಶ್ರೀನಾರಾಯಣ ಖಾಸಗಿ ಶಾಲೆಯಲ್ಲಿ ಈ ಅವಘಡ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧ್ಯಾಹ್ನ 12:30ರ ಸುಮಾರಿಗೆ ಶಾಲೆಯ ಗೋಡೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಓರ್ವ ವಿದ್ಯಾರ್ಥಿಯ ತಲೆಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮಕ್ಕಳು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular